Kukke subramanya Bus Stand 🚍🔥
Автор: KKRTC RAICHUR VLOG
Загружено: 2025-01-10
Просмотров: 5525
Описание:
Kukke subramanya Bus Stand 🚍🔥#bussid #bus #kukkesubramanya #kkrtc #ksrtc #volg #goa #vlog #volvo #ksrtcblog #goavlog #travel #travelvideo #tourist #ksrtcbus #vlogs #travelvlog #trending #trendingvideo #viral #youtube #youtubevideo #video #KKRTCRAICHURVLOGZZZ #viralvideos
/ @kkrtcraichurvlog
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ. ಇಲ್ಲಿ ಈಶ್ವರ ಪುತ್ರ ಷಣ್ಮುಖ ದೇವರನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತದೆ.ನಾಗಾರಾಧನೆ ಇಲ್ಲಿ ಅತ್ಯಂತ ಮಹತ್ವವನ್ನು ಪಡೆದುಕೊಂಡಿದ್ದು ನಾಗಮಂಡಲವೆಂಬ ಸಾಂಪ್ರದಾಯಿಕ ನೃತ್ಯವನ್ನು ಕಾಣಬಹುದು.
ಮಹಾತ್ತೋಭಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಆದಿ ಶಂಕರರ ಕಾಲದಿಂದ ಸ್ಥಾನಿಕ ಸ್ಮಾರ್ತ ಮೊರೋಜ(ಮೋರ-ಮೈಯೂರ ಓಜಜಾಚಾರ್ಯ) ಮನೆತನದ ಆಡಳಿಕೆ ಒಳಪಟ್ಟಿದ್ದ ದೇವಾಲಯವಾಗಿದೆ. ಹಿಂದೆ ಸ್ಮಾರ್ತ ಬ್ರಾಹ್ಮಣರಿಂದ ಪೂಜೆಗೊಳ್ಳುತ್ತಿದ್ದ ಸುಬ್ರಹ್ಮಣ್ಯ ಈಗ ಮಾಧ್ವ ಬ್ರಾಹ್ಮಣರ ಪೂಜಾಧೀನದಲ್ಲಿ ಈ ದೇವಾಲಯವಿದೆ ಸದ್ಯ ಈಗ ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ.
ಇಲ್ಲಿಯ ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ ಮಧ್ಯಭಾಗದಲ್ಲಿ ಶ್ರೀ ದೇವರ ಮೂರ್ತಿಯಿದೆ. ಅದರ ಮೇಲಿನ ಹಂತದಲ್ಲಿ ಶ್ರೀ ಸುಬ್ರಹ್ಮಣ್ಯ ಮೂರ್ತಿ ಮತ್ತು ವಾಸುಕಿ ಹಾಗೂ ಕೆಳ ಹಂತದಲ್ಲಿ ಆದಿಶೇಷನ ಮೂರ್ತಿಗಳಿವೆ. ಭಕ್ತಾದಿಗಳು ಒಳ ಸುತ್ತನ್ನು ಪ್ರವೇಶಿಸುವಾಗ ತಮ್ಮ ಶರ್ಟ್, ಬನಿಯಾನುಗಳನ್ನು ತೆಗೆಯಬೇಕಾಗುವುದು.
ಕುಕ್ಕೆ ಸುಬ್ರಹ್ಮಣ್ಯ ನಾಗಗಳ ವಾಸಸ್ಥಾನವಾಗಿದೆ. ಇಲ್ಲಿ ಶ್ರೀ ಸುಬ್ರಹ್ಮಣ್ಯನಿಗೆ ಸಲ್ಲಿಸಿದ ಪೂಜೆಯು ಸರ್ಪರಾಜನಾದ ವಾಸುಕಿಗೆ ಸಲ್ಲುವುದು. ಹಾಗಾಗಿ ಈ ಸ್ಥಳವು ಎಲ್ಲಾ ತರಹದ ನಾಗದೋಷಗಳ ಪರಿಹಾರ ಸ್ಥಳವಾಗಿ ನಂಬಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ ಹಾಗೂ ಇತರ ಪೂಜಾದಿಗಳನ್ನು ಸಲ್ಲಿಸಲು ಭಕ್ತಾದಿಗಳು ಬರುತ್ತಿರುತ್ತಾರೆ
Повторяем попытку...
Доступные форматы для скачивания:
Скачать видео
-
Информация по загрузке: